ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಬೆಸ್ಕಾಂ ಸಿದ್ದತೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಬರುವ 3 ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಸಿದ್ದತೆ ನಡೆಸಿದೆ. ಈಗಾಗಲೇ ದರ ಹೆಚ್ಚಳಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.
ಈ ಸಂಬಂಧ ಫೆ.17 ರಂದು ಸಾರ್ವಜನಿಕರ ಆಕ್ಷೇಪಣೆಗೆ ಆಹ್ವಾನ ನೀಡಲಾಗಿದ್ದು, ತದನಂತರ ಸಭೆ ನಡೆಸಿ ವಿದ್ಯುತ್ ದರ ಏರಿಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಬೆಸ್ಕಾಂ ಪ್ರಸ್ತಾವನೆಗೆ ಉದ್ಯಮಿಗಳು ಕಿಡಿಕಾರಿದ್ದಾರೆ.
ಮೆಟ್ರೋ, ಬಸ್ ಟಿಕೆಟ್ ದರ ಹೆಚ್ಚಳದ ಬೆನ್ನಲ್ಲೇ ಬೆಂಗಳೂರಿಗರಿಗೆ ಬೆಸ್ಕಾಂ ಕರೆಂಟ್ ಶಾಕ್ ನೀಡೋದು ಪಕ್ಕಾ ಎಂದು ಹೇಳಲಾಗುತ್ತಿದೆ.