
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟದ ವೇಳೆಯೇ ಡಿಸಿಪಿ ಕಾರಿನ ಮೇಲೆಯೂ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸಿಪಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಕಿಡಿಗೇಡಿಗಳು ದಾಂಧಲೆ ನಡೆಸಿದ್ದರು. ಕಿಡಿಗೇಡಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೀಗ ಸಿಸಿಟಿವಿ ವಿಡಿಯೋ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಈವರೆಗೆ 20 ಜನರನ್ನು ಬಂಧಿಸಲಾಗಿದೆ.