
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ,
ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟದ ಪ್ರಮುಖ ಆರೋಪಿ ಸುರೇಶ್, ಪ್ರತಾಪ್ ಸಿಂಹನ ಭಂಟನಾಗಿದ್ದು, ಘಟನೆಯ ಪ್ರಮುಖ ರೂವಾರಿಯೇ ಪ್ರತಾಪ್ ಸಿಂಹ ಎಂದು ಆರೋಪಿಸಿ ಯುವ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ತನಿಖೆಗೆ ಒಳಪಡಿಸುವಂತೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.