
ಹೈದರಾಬಾದ್: ಪತಿಯ ಚಿತ್ರಹಿಂಸೆ ತಾಳಲಾರದೇ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಗೋಪಾಲಪಟ್ಟಣದ ನಂದಮೂರಿ ಕಾಲೋನಿಯಲ್ಲಿ ನಡೆದಿದೆ.
ವಸಂತಾ ಆತ್ಮಹತ್ಯೆಗೆ ಶರಣಾಗಿರುವ ನವವಿವಾಹಿತೆ. ಕೆಲ ದಿನಗಳ ಹಿಂದಷ್ಟೇ ವಸಂತಾಳನ್ನು ನಾಗೇಂದ್ರ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಇದೀಗ ಮನೆಯಲ್ಲಿಯೇ ನೇಣು ಬಿಗಿದುಕೊಂಡು ವಸಂತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತಿ ತನ್ನ ಲೈಂಗಿಕ ವಿಡಿಯೋವನ್ನು ತೋರಿಸಿ ಚಿತ್ರಹಿಂಸೆ ನೀಡುತ್ತಿದ್ದನಂತೆ. ಇದರೊಂದ ಬೇಸತ್ತ ವಸಂತಾ ಸಾವಿಗೆ ಶರಣಾಗಿದ್ದಾಳೆ.
ಅಳಿಯನೇ ಮಗಳನ್ನು ಕೊಂದು ಆತ್ಮಹತ್ಯೆ ಎಂದು ಕಥೆ ಕಟ್ಟಿದ್ದಾನೆಂದು ವಸಂತಾ ಪೋಷಕರು ದೂರು ದಾಖಲಿಸಿದ್ದಾರೆ. ಆರೋಪಿ ಪತಿ ನಾಗೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.