![](https://kannadadunia.com/wp-content/uploads/2024/07/FIR-FIR-fir.png)
ಚಿಕ್ಕಮಗಳೂರು: ಸರ್ವೆಯರ್ ಕೆ.ಎಸ್. ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ಮೊದಲು ಶಿವಕುಮಾರ್ ಬರೆದಿಟ್ಟಿದ್ದರು ಎನ್ನಲಾದ ಪತ್ರ ಪೊಲೀಸರಿಗೆ ದೊರೆತಿದ್ದು, ಸಾವಿಗೆ ಮೂವರು ಕಾರಣವೆಂದು ಅವರು ಬರೆದಿದ್ದಾರೆ ಎನ್ನಲಾಗಿದೆ.
ಖಾಸಗಿ ಕಾಲೇಜಿನ ಉಪನ್ಯಾಸಕಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದು, ಉಪನ್ಯಾಸಕಿ ಪದೇಪದೇ ಹಣಕ್ಕೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕುನ್ನಹಳ್ಳಿ ಗ್ರಾಮದ ಜಮೀನು ಸರ್ವೆ ವಿಷಯದಲ್ಲಿ ಇಬ್ಬರು ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದಿರುವುದಾಗಿ ಶಿವಕುಮಾರ್ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದ್ದು, ಅವರ ಪತ್ನಿ ಪುಷ್ಪಾ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನವರಾದ ಶಿವಕುಮಾರ್ ಮೂಡಿಗೆರೆ ಭೂಮಾಪನ ಕಚೇರಿಯಲ್ಲಿ ಸರ್ವೆಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಡಿಗೆರೆಯ ಬಾಡಿಗೆ ಮನೆಯಲ್ಲಿ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.