ಮಹಾಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ.
ಮಿರ್ಜಾಪುರ- ಪ್ರಯಾಗ್ ರಾಜ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೊಲೆರೊ ವಾಹನ ಹಾಗೂ ಬಸ್ ಡಿಕ್ಕಿಯಾಗಿ 10 ಮಂದಿ ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ.
ಮೃತರು ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯವರು ಎಂದು ಹೇಳಲಾಗಿದೆ. ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.