![](https://kannadadunia.com/wp-content/uploads/2024/01/kfd-monkey-disease.jpg)
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ-ಕೆಎಫ್ ಡಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಹೆಚ್ಚಿದ್ದು, ಆರೋಗ್ಯ ಇಲಾಖೆ ಯಾರೂ ಕಾಡಿನತ್ತ ಹೋಗಬೇಡಿ ಎಂದು ಸೂಚನೆ ನೀಡಿದೆ. ಕೊಪ್ಪ ಮತ್ತು ಎನ್ ಆರ್ ಪುರ ತಾಲೂಕಿನ ನಾಲ್ವರಲ್ಲಿ ಹೊಸದಾಗಿ ಕೆ ಎಫ್ ಡಿ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ ಎಫ್ ಡಿ ಸೋಂಕಿತರಿಗಾಗಿಯೇ ವಿಶೇಷ ವಾರ್ಡ್ ತೆರೆಯಲಾಗಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಮಂಗನ ಕಾಯಿಲೆ ನಿಯಂತ್ರಣ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸೋಂಕು ಕಂಡು ಪ್ರದೇಶದಲ್ಲಿ ಎಲ್ಲರ ರಕ್ತದ ಮಾದರಿ ಸಂಗ್ರಹಿಸುತಿದ್ದಾರೆ.