![](https://kannadadunia.com/wp-content/uploads/2022/06/Karnataka_high_court_EPS1479.jpg)
ಬೆಂಗಳೂರು: ಡೆಂಗ್ಯೂ ಹರಡಲು ಕಾರಣದಾರವರಿಗೆ ಭಾರಿ ಮೊತ್ತದ ದಂಡ ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಡೆಂಗ್ಯೂ ಸೋಂಕು ಪೀಡಿತರು ಗುಣಮುಖರಾಗಲು ಕೇವಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದೇ ತಮ್ಮ ಕರ್ತವ್ಯ ಎಂದು ಭಾವಿಸದೇ ಈ ರೋಗ ಹರಡುವುದಕ್ಕೆ ಕಾರಣರಾದ ವ್ಯಕ್ತಿಗಳು, ಸಂಘ ಸಂಸ್ಥೆಗಳು ಹಾಗೂ ವಸತಿ ಸಮುಚ್ಛಯಗಳಿಗೆ ಭಾರಿ ದಂಡ ವಿಧಿಸಬೇಕು. ಈ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆ ತರುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಡೆಂಗ್ಯೂ ಪ್ರಕರಣ ಹೆಚ್ಚ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.