![](https://kannadadunia.com/wp-content/uploads/2024/11/elephant.png)
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ಭದ್ರಾ ಹಿನ್ನೀರಿನಲ್ಲಿ ಮತ್ತೆ 30ಕ್ಕೂ ಹೆಚ್ಚು ಕಡಾನೆಗಳ ಹಿಂಡು ಬೀಡುಬಿಟ್ಟಿವೆ.
ಭದ್ರಾ ಹಿನ್ನೀರಿನ ಬಳಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ನಿನೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಡಿಗೆ ಅಟ್ಟಿದ್ದರು. ಇಂದು ಬೆಳಗಾಗುವಷ್ಟರಲ್ಲಿ ಮತ್ತೆ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಭದ್ರಾ ಹಿನ್ನೀರು ಪ್ರದೇಶದಲ್ಲಿ ಬೀಡುಬಿಟ್ಟಿದ್ದು, ಚಿಕ್ಕಮಗಳೂರಿನ ಎನ್ ಆರ್ ಪುರ ಹಾಗೂ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.