ಬೆಂಗಳೂರು : ನಟ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಗಲಿದ್ದು, ನಾಳೆ ಡೆವಿಲ್ ಚಿತ್ರದ ಟೀಸರ್ ರಿಲೀಸ್ ಆಗಲಿದೆ.
ದರ್ಶನ್ ಜೈಲಿಗೆ ಹೋದಾಗಿನಿಂದ ಡೆವಿಲ್ ಚಿತ್ರದ ಶೂಟಿಂಗ್ ಬಂದ್ ಆಗಿತ್ತು. ಕಳೆದ 7-8 ತಿಂಗಳಿನಿಂದ ಸಿನಿಮಾದ ಶೂಟಿಂಗ್ ಬಂದ್ ಆಗಿದ್ದು, ದರ್ಶನ್ ಹುಟ್ಟು ಹಬ್ಬವಾದ ಫೆ.16 ರಂದು ನಾಳೆ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ.
ಡೆವಿಲ್ ಸಿನಿಮಾವನ್ನು ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ರಚನಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಕೂಡ ಮುಖ್ಯ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಸುಧಾಕರ್ ರಾಜ್ ಚಿತ್ರಕ್ಕೆ ಛಾಯಾಗ್ರಹಣ ನೀಡಿದ್ದು, ಮುಂದಿನ ತಿಂಗಳು ಸಿನಿಮಾದ ಶೂಟಿಂಗ್ ಮತ್ತೆ ಆರಂಭವಾಗುವ ಸಾಧ್ಯತೆಯಿದೆ.