ಬೆಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕಾ ನೀತಿ ಪ್ರಕಟಿಸಲಾಗಿದ್ದು, 20 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 2025-30ರ ಅವಧಿಗೆ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗಿದ್ದು, ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ. ಹೊಸ ನೀತಿಯಡಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಸ್ವಿಫ್ಟ್ ಸಿಟಿ ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ ₹1 ಲಕ್ಷ ಕೋಟಿ ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆಯಿದೆ ಎಂದು ಕೈಗಾರಿಕೆ ಸಚಿವರಾದ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.