ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ https://ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.15 ರಿಂದ ಮಾ.10ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, , ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.