
ರಾಯಚೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಹೋಗಿ ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ಮಹದೇವ ವಾಲೇಕರ್(48) ಮೃತಪಟ್ಟವರು. ಮಧ್ಯಪ್ರದೇಶದ ಮೈಹೂರ್ ಸಮೀಪ ಕಾರ್ ಡಿಕ್ಕಿಗಾಗಿ ಘಟನೆ ನಡೆದಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಾದೇವ ವಾಲೇಕರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಕಾರ್ ಅನ್ನು ಮಧ್ಯಪ್ರದೇಶ ಪೊಲೀಸರು ಜಪ್ತಿ ಮಾಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.