
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ ಪ್ರಕರಣದಲ್ಲಿ ವಿಧಾನಸೌಧ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆ ಎ ಎಸ್ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ ಮುಖ್ಯಮಂತ್ರಿಗಳ ಕಚೇರಿಯ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದ. ಈ ಬಗ್ಗೆ ಸಚಿವಾಲಯ ದೂರು ನೀಡಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಲವು ಶಾಸಕರ ಬಳಿ ಪಿಎ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಈತ ಅಧಿಕಾರಿಗಳಿಗೆ ಪೋಸ್ಟಿಂಗ್ ಕೊಡುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಎಂಬ ಆರೋಪ ಕೂಡ ಕೇಳಿಬಂದಿದೆ.