
ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.
ಬಸವರಾಜ್ ಮೃತ ವ್ಯಕ್ತಿ. ನಾಲ್ಕು ಫೈನಾನ್ಸ್ ಕಂಪನಿಗಳಲ್ಲಿ 2.50 ಲಕ್ಷ ಸಾಲ ಪಡೆದಿದ್ದರು. ವಾರದ ಕಂತು ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು. ಫೈನಾನ್ಸ್ ನವರ ಕಿರುಕುಳ ತಾಳಲಾರದೇ ಫೆ.11ರಂದು ಬಸವರಾಜ್ ವಿಷ ಸೇವಿಸಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಬಸವರಾಜ್ ಮೃತಪಟ್ಟಿದ್ದಾರೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.