HomeKarnatakaBREAKING: ರಸ್ತೆ ಬದಿ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

BREAKING: ರಸ್ತೆ ಬದಿ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ಹುಬ್ಬಳ್ಳಿಯ ವಿದ್ಯಾನಗರದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿದೆ.

21 ವರ್ಷದ ಸುಜಿತ್ ಮತ್ತು 17 ವರ್ಷದ ವಿಕಾಸ್ ಮೃತಪಟ್ಟವರು ಎಂದು ಹೇಳಲಾಗಿದೆ. ಸಿಸಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಜ್ಜಿ ತಿಥಿ ಮುಗಿಸಿ ಬರುತ್ತಿದ್ದ ಯುವಕರು ಅಪಘಾತಕ್ಕೆ ಬಲಿಯಾಗಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular