
ಹುಬ್ಬಳ್ಳಿ: ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಒಳಜಗಳ ಜೋರಾಗುತ್ತಿದ್ದು, ಇದು ವಿಕೋಪಕ್ಕೆ ತಿರುಗಿ ಸರ್ಕಾರ ಶೀಘ್ರ ಪತನವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮುಖ್ಯಮಂತ್ರಿ ಆಯ್ಕೆಯ ಕುರಿತಾಗಿ ಗೊಂದಲ ಸೃಷ್ಟಿಯಾಗಿತ್ತು. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಒಪ್ಪಂದವಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈಗ ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಮತ್ತು ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ತಂತ್ರ ಪ್ರತಿತಂತ್ರ ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಹುದ್ದೆಯಿಂದ ಕೆಳಗಿಳಿಸಲು ಮತ್ತೊಂದು ಗುಂಪು ಪ್ರಯತ್ನಿಸುತ್ತಿದೆ. ಇವೆಲ್ಲಾ ಒಳಜಗಳದಿಂದಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.