ಬೆಂಗಳೂರು : ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
4 ತಿಂಗಳಿನಿಂದ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಜಮಾ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನಾವು ಯಾವುದೇ ಕಾರಣಕ್ಕೂ ಹಣ ಹಾಕುವುದನ್ನು ನಿಲ್ಲಿಸಲ್ಲ ಎಂದು ಅವರು ಹೇಳಿದರು.
ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುತ್ತಿದ್ದ ಹಣ ಕಳೆದ 5 ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ.ಬಿಪಿಎಲ್ ಕಾರ್ಡ್ ನ ಗರಿಷ್ಠ ನಾಲ್ಕು ಸಂಖ್ಯೆಯ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಅಕ್ಕಿ ಪೂರೈಕೆಯಾಗದ ಕಾರಣ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡಿ ಉಳಿದ ಐದು ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ.ಹಣದ ಬದಲಿಗೆ ಅಕ್ಕಿ ನೀಡುವುದಾಗಿ ಹೇಳಲಾಗಿದ್ದರೂ, ಅದು ಕಾರ್ಯರೂಪಕ್ಕೆ ಬಂದಿಲ್ಲ. ವಾಸ್ತವದಲ್ಲಿ ಕಳೆದ ಐದು ತಿಂಗಳಿಂದ ಹೆಚ್ಚುವರಿ ಅಕ್ಕಿಯನ್ನಾಗಲಿ, ಹಣವನ್ನಾಗಲಿ ನೀಡುತ್ತಿಲ್ಲ.
ಈ ನಡುವೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಪ್ರೋತ್ಸಾಹ ಧನ ಕೂಡ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಹೆಚ್ಚುವರಿಯ ಅಕ್ಕಿಯ ಹಣ ಕೂಡ ಬಿಡುಗಡೆಯಾಗಿಲ್ಲ. ಇದನ್ನೇ ನಂಬಿಕೊಂಡವರಿಗೆ ಸಂಕಷ್ಟ ಎದುರಾಗಿದೆ .