ಬೆಂಗಳೂರು : ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆ ಹಣ್ಣು ವಿತರಣೆ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಹಾಗೂ ಚಿಕ್ಕಿ ವಿತರಣೆಗೆ ಸರ್ಕಾರ ಬ್ರೇಕ್ ಹಾಕಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಿ ಆದೇಶಿಸಿದೆ.
ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು. ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸತಕ್ಕದ್ದು.
ಈ ಆದೇಶವನ್ನು ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 07 ಟಿ.ಎಫ್.ಪಿ 2024. ದಿನಾಂಕ: 03.01.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.


