
ಬೆಂಗಳೂರು: ಮೆಟ್ರೋ ರೈಲು, ಬಸ್, ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಪ್ರತಿ ಲೀಟರ್ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಕೈಗೊಂಡಿದೆ ಎಂದು ಹೇಳಲಾಗಿದೆ.
ಹಾಲಿನ ದರವನ್ನು ಆಗಸ್ಟ್ 2023ರಲ್ಲಿ 3 ರೂಪಾಯಿ ಹೆಚ್ಚಳ ಮಾಡಿದ್ದು, ಲೀಟರ್ ಗೆ 42 ರೂಪಾಯಿಗೆ ಹೆಚ್ಚಿಸಲಾಗಿತ್ತು. ಜೂನ್ 2024 ರಲ್ಲಿ ಪ್ರತಿ ಪ್ಯಾಕೇಟ್ ಗೆ 500 ಮಿಲಿ ಹಾಲು ಹೆಚ್ಚುವರಿಯಾಗಿ ನೀಡಿ ಮತ್ತೆ ಎರಡು ರೂಪಾಯಿ ಏರಿಕೆ ಮಾಡಲಾಗಿತ್ತು.
ರಾಜ್ಯದ 16 ಹಾಲು ಒಕ್ಕೂಟಗಳಿಂದ ಪ್ರತಿ ಲೀಟರ್ ಗೆ 5 ರೂ. ಏರಿಕೆ ಮಾಡಲು ಒತ್ತಡವಿದೆ. ಹೀಗಾಗಿ ಹಾಲಿನ ದರ ಏರಿಕೆ ಮಾಡುವಂತೆ ಕೆಎಂಎಫ್ ಕಳೆದ ವರ್ಷವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ವಿದ್ಯುತ್, ಲೇಬರ್, ಪಶು ಆಹಾರ, ಇತರೆ ಖರ್ಚು ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹಾಲಿನ ದರ ಐದು ರೂ. ಏರಿಕೆ ಮಾಡಲು ಬೇಡಿಕೆ ಇಟ್ಟಿದ್ದು, ಸರ್ಕಾರ ಈ ಬಗ್ಗೆ ಬಜೆಟ್ ಬಳಿಕ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.