
ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದ ರಾಜ್ಯದಲ್ಲಿ 8 ರಿಂದ 12ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಪಠ್ಯದ ಜೊತೆಗೆ ಕೌಶಲ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಪ್ರೌಢಶಾಲೆ ಹಂತದಲ್ಲಿಯೇ ಕೌಶಲ್ಯ ಕಲಿಸಬೇಕೆ ಹೊರತು ಪಿಯುಸಿ ಪ್ರವೇಶಿಸಿದ ಅಥವಾ ಮುಗಿದ ನಂತರವಲ್ಲ. ಹೀಗಾಗಿ ರಾಜ್ಯದಲ್ಲಿ ಸ್ಕಿಲ್ ಅಟ್ ಸ್ಕೂಲ್ ಯೋಜನೆ ಜಾರಿಗೆ ಚಿಂತನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿವರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.