
ಹಾವೇರಿ: ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ. ರಾಜ್ಯಾದ್ಯಂತ ಸುಮಾರು 6,000 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಪಂಚಾಯಿತಿಗಳು, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳಿಂದ 6,000 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದ್ದು, ಈ ಬಗ್ಗೆ ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಬಳಿಕ ಮಾತನಾಡಿ, ರಾಜ್ಯದಲ್ಲಿ ಪ್ರಸಕ್ತ ವರ್ಷ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆಗೆ ಸಿದ್ಧತೆ ಮಾಡಿಕೊಂಡಿದೆ. ಬೇರೆ ರಾಜ್ಯಗಳಿಂದ 19,500 ಮೆಗಾ ವ್ಯಾಟ್ ವಿದ್ಯುತ್ ಖರೀದಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ 6 ಸಾವಿರ ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದ್ದು, ವಸೂಲಿಗೆ ಸಂಬಂಧಿಸಿದಂತೆ ಸಂಬಂಧಿತ ಸಚಿವರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.