ಬೆಂಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿಯಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆಯಲಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಕೇರಳ ಮೂಲದ ಸಾಹಹುಕ್ (28) ಅರ್ಶು (23) ಎಂದು ಗುರುತಿಸಲಾಗಿದೆ. ಮೃತರು ಗೊಟ್ಟಿಗೆರೆಯ ಟಿ ಜಾನ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.