
ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಹಣ ಕಳೆದ ಮೂರು ತಿಂಗಳಿಂದ ಬಿಡುಗಡೆಯಾಗಿಲ್ಲ. ಇದರಿಂದ ಫಲಾನುಭವಿಗಳು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಗೃಹಲಕ್ಷ್ಮೀ ಹಣ ನಂಬಿ ಅದೆಷ್ಟೋ ಜನರು ಜೀವನ ಸಾಗಿಸುತ್ತಿದ್ದರು. ಆದರೆ ಕಳೆದ ಮೂರು ತಿಂಗಳಿಂದ ಹಣ ಜಮೆ ಆಗಿಲ್ಲ ಇದರಿಂದ ನೊಂದ ಫಲಾನುಭವಿಗಳು ಪ್ರತಿಭಟನೆಗೆ ಮುಂದಾಗುತ್ತಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ . ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯಾವುದೇ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ. ಯೋಜನೆಗಳಿಗೆ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ. ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಹಣ ಒಮ್ಮೆಲೆ ಖಾತೆಗೆ ಜಮೆ ಆಗಲಿದೆ. ಈತಿಂಗಳು ಅನ್ನಭಾಗ್ಯ ಯೋಜನೆಯ ಹಣ ಕೂಡ ಬಿಡುಗಡೆಯಾಗಲಿದೆ ಎಂದು ಹೇಳಿದರು.