ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪಿಎಸ್ಐ ರೂಪೇಶ್ ಏಕಾಏಕಿ ವರ್ಗಾವಣೆ ಆಗಿದ್ದಾರೆ.
ಮೈಸೂರಿನ ಉದಯಗಿರಿ ಗಲಭೆ ಪ್ರಕರಣ ಸುದ್ದಿಯಲ್ಲಿರುವಾಗಲೇ ಮೈಸೂರಿನ ಉದಯಗಿರಿ ಪಿಎಸ್ಐ ರೂಪೇಶ್ ಏಕಾಏಕಿ ವರ್ಗಾವಣೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಟ್ಯಾಫಿಕ್ ಮ್ಯಾನೇಜ್ ಮೆಂಟರ್ ಸೆಂಟರ್ ಗೆ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.