ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದು ಹೇಳಿದರು.
ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ.ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸುತ್ತೇನೆ. pic.twitter.com/iBCRNWAfts
— Siddaramaiah (@siddaramaiah) February 17, 2025