
ಬೀದರ್: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ ಕೆರೆ ಸೇತುವೆ ಬಳಿ ನಡೆದಿದೆ.
46 ವರ್ಷದ ಗುಂಡಪ್ಪ ಬಿರಾದಾರ್ ಹಾಗೂ 42 ವರ್ಷದ ಉಮೇಶ್ ರಾಜೊಳೆ ಮೃತ ದುರ್ದೈವಿಗಳು. ರಾಷ್ಟ್ರೀಯ ಹೆದ್ದಾರಿ ಕಡೆಯಿಂದ ನಗರದತ್ತ ಸಾಗುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರಿಬ್ಬರೂ ತ್ರಿಪುರಾಂತ ನಿವಾಸಿಗಳು ಎಂದು ತಿಳಿದುಬಂದಿದೆ.