
ಶ್ರೀನಗರ: ಕೇಂದ್ರೀಯ ಮೀಸಲು ಪಡೆ(CRPF)ಯ ಯೋಧರೊಬ್ಬರು ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ನಡೆದಿದೆ.
ಪ್ರವೀಣ್ ಪಾಟೀಲ್ ಆತ್ಮಹತ್ಯೆಗೆ ಶರಣಾದವರು. ಮಹಾರಾಷ್ಟ್ರ ಮೂಲದ ಪ್ರವೀಣ್ ಪಾಟೀಲ್ ಸಿಆರ್ ಪಿಎಫ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಿಗ್ಗೆಯಷೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಟಿಕ್ರಿ ಪ್ರದೇಶದ ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಿಂದ ವಾಪಾಸ್ ಆದವರೇ ತಮ್ಮದೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಧನ ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ತಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.