
ಚಿತ್ರದುರ್ಗ: ಕಳೆದ ಎರಡು ಮೂರು ತಿಂಗಳಿಂದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ರಾಜ್ಯಾದ್ಯಂತ ಫಲಾನುಭವಿಗಳಿಂದ ಆಕ್ರೋಶ ವ್ಯಕ್ತವಾಗಿದೆ.
ಹಣ ವಿಳಂಬದ ಬಗ್ಗೆ ಪ್ರತಿಕ್ರಿಯೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಅದೇನು ತಿಂಗಳ ಸಂಬಳ ಅಲ್ವಲ್ಲಾ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದೇನು ತಿಂಗಳ ಸಂಬಳ ಅಲ್ವಲ್ಲಾ ಎಂದಿದ್ದಾರೆ.
ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಆಗುತ್ತಿದೆ. ಕೆಲವು ತಿಂಗಳಿಂದ ಜಮಾ ಆಗಿಲ್ಲ. ಗೃಹಲಕ್ಷ್ಮಿ ಹಣ ತಿಂಗಳು ಬರುವ ಸಂಬಳ ಅಲ್ಲವೇ ಅಲ್ಲ, ಎರಡು ಮೂರು ತಿಂಗಳಿಗೊಮ್ಮೆ ಜಮಾ ಮಾಡುತ್ತೇವೆ ಎಂದು ಮೊದಲೇ ಹೇಳಬೇಕಿತ್ತು ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.