
ಮಲಪ್ಪುರಂ: ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಾವಳಿ ವೇಳೆ ಪಟಾಕಿ ಸಿಡಿಸಿದ ಪರಿಣಾಮ ಪಟಾಕಿ ಕಿಡಿ ತಗುಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಅರೀಕೋಡ್ ನಲ್ಲಿ ನಡೆದಿದೆ.
ಮೈದಾನದಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಭಾರಿ ಪಟಾಕಿ ಸಿಡಿಸಲಾಗಿದೆ. ಪರಿಣಾಮ ಪಟಾಕಿ ಕಿಡಿ ಮೈದಾನದ ತುಂಬೆಲ್ಲ ಹರಡಿ, ಪಂದ್ಯ ವೀಕ್ಷಿಸಲು ಕುಳಿತಿದ್ದ ಜನರ ಮೇಲೂ ಬಿದ್ದಿದೆ. ಇದರಿಂದ ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.