ಬೆಂಗಳೂರು : ಸಿಮೆಂಟ್ ಲಾರಿ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಕೃಷ್ಣ ಮಠದ ಬಳಿ ಈ ಘಟನೆ ನಡೆದಿದೆ. ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ವೇಗವಾಗಿ ಬಂದ ಲಾರಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಪಾದಚಾರಿ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.