
ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ತುಂಬೆಲ್ಲ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಪ್ರಾಣ ಉಳಿಸಿಕೊಳ್ಳಲು ಜನರು ಕಟ್ಟಡದಿಂದ ಕೆಳಗೆ ಜಿಗಿದ ಘಟನೆ ದೆಹಲಿಯ ಜನತಾ ಮಾರ್ಕೆಟ್ ಬಳಿ ನಡೆದಿದೆ.
ನಂಗ್ಲೋಯಿಸ್ ಬಳಿಯ ಮಾರ್ಕೆಟ್ ನ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕಟ್ಟಡವನ್ನು ವ್ಯಾಪಿಸಿಕೊಳ್ಳುತ್ತಿದ್ದಂತೆ ಜನರು ಜೀವ ಉಳಿಸಿಕೊಳ್ಳಲು ಕೂಗಾಟ, ಚೀರಾಟ ನಡೆಸಿದ್ದಾರೆ. ಈ ವೇಳೆ ಕೆಲವರು ಬೇರೆ ದಾರಿ ಕಾಣದೇ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದಿದ್ದಾರೆ.
ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.