
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಧಗೆ ಹೆಚ್ಚುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು, ಬಿಸಿಗಾಳಿ ಆರಂಭವಾಗಿದ್ದು, 20 ವರ್ಷಗಳಲ್ಲೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬಿಸಿಲ ಬೇಗೆಗೆ ಸಿಲಿಕಾನ್ ಸಿಟಿ ಜನರು ತತ್ತರಿಸುತಿದ್ದಾರೆ. ಫೆಬ್ರವರಿಯಲ್ಲಿಯೇ ದಾಖಲೆ ಪ್ರಮಾಣದ ತಾಪಮಾನ ದಾಖಲಾಗಿದೆ. ಫೆ.17ರಂದು ಬೆಂಗಳೂರಿನಲ್ಲಿ ಕಳೆದ 20 ವರ್ಶಗಳಲ್ಲೆ ಗರಿಷ್ಠ ತಾಪಮಾನ ದಾಖಲಾಗಿದೆ.
ಫೆ.17ರಂದು ಬೆಂಗಳೂರು ನಗರದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು 2005ರ ದಾಅಖಲೆಯನ್ನು ಸರಿಗಟ್ಟಿದೆ. ದೆಹಲಿಗಿಂತಲೂ ಅತ್ಯದಿಕ ತಾಪಮಾನ ದಾಖಲಾಗುತ್ತಿದ್ದು, ಬೆಂಗಳೂರಿಗರು ಹೈರಾಣಾಗಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಈ ವರ್ಷ ಬೆಂಗಳೂರಿನಲ್ಲಿ ಬಿಸಿಲ ಝಳ ಇನ್ನಷ್ಟು ಹೆಚ್ಚಾಗಲಿದೆ. ರಾಜ್ಯದಲ್ಲಿ ಗಮನಾರ್ಹವಾಗಿ ಹವಾಮಾನ ಬದಲಾವಣೆಯಾಗುತ್ತಿದೆ.
ಫೆ.17ರಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ ದೆಹಲಿಯಲ್ಲಿ 27 ಡಿಗ್ರಿ ಸೆಲ್ಸಿಯಸ್ ಇತ್ತು. ಸಾಮಾನುವಾಗಿ ಉತ್ತರ ಭಾರತದಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಆದರೆ ಈ ಬಾರಿ ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗುತ್ತಿದೆ.