ಬೆಂಗಳೂರು : ಅನ್ನಭಾಗ್ಯದ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೌದು,. ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎಂಬಂತೆ ಹಣದ ಬದಲು ಇನ್ಮುಂದೆ 10 K.G ಅಕ್ಕಿ ಕೊಡಲು ಸರ್ಕಾರ ನಿರ್ಧರಿಸಿದೆ.
ಹೌದು, ಪ್ರತಿ ಫಲಾನುಭವಿಗಳಿಗೆ ಫೆಬ್ರವರಿ ತಿಂಗಳಿನಿಂದಲೇ 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿನ್ನೆಲೆ ಸರ್ಕಾರ ಹೆಚ್ಚುವರಿ ಅಕ್ಕಿ ಖರೀದಿಸಲು ತೀರ್ಮಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅನ್ನಭಾಗ್ಯದ ಹಣ ಬಂದಿಲ್ಲ, ಇತ್ತ ಕಡೆ ಅಕ್ಕಿಯೂ ಸಿಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ . ಇತ್ತ ಕಡೆ ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದರ ನಡುವೆ ಸರ್ಕಾರ ಪ್ರತಿ ಫಲಾನುಭವಿಗಳಿಗೆ ಫೆಬ್ರವರಿ ತಿಂಗಳಿನಿಂದಲೇ 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಹೆಚ್ಚುವರಿ 5 ಕೆಜಿ ಅಕ್ಕಿಗೆ ಫಲಾನುಭವಿಗಳಿಗೆ 170 ರೂ ನೀಡಲಾಗುತ್ತಿತ್ತು. ಸದ್ಯ ಇದನ್ನು ಸ್ಥಗಿತಗೊಳಿಸಿ ಅಕ್ಕಿಯನ್ನೇ ಕೊಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.