
ಕಲಬುರಗಿ: ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ರೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 33 ವರ್ಶದ ಸೈಯದ್ ಅಝರುದ್ದೀನ್ ಮೃತ ವ್ಯಕ್ತಿ.
ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ಸೈಯದ್ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಯಿಲೆಯಿಂದ ತೀವ್ರವಾಗಿ ಮನನೊಂದು ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.
ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.