
ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ ನಂತರ ಮುಖ್ಯಮಂತ್ರಿಗಳು ಹಾಲಿನ ದರ ಹೆಚ್ಚಳಕ್ಕೆ ಸಮ್ಮತಿಸುವ ಸಾಧ್ಯತೆ.
ಕೆಎಂಎಫ್ ಮತ್ತು ಅದರ ಸದಸ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡಬೇಕೆಂದು ಅನೇಕ ತಿಂಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿವೆ. ಮತ್ತೊಂದು ಕಡೆ ರೈತರು ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿ ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿದ್ದರು.
ಇದರ ಬೆನ್ನಲ್ಲೇ ಕೆಎಂಎಫ್ ಮತ್ತು ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಸಭೆ ನಡೆಸಿ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದ್ದರು. ಈ ನಿರ್ಧಾರದಂತೆ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ ನಂತರ ಮುಖ್ಯಮಂತ್ರಿಗಳು ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.