
ಬೆಂಗಳೂರು: ತಾಯಿ ಮೇಲೆ ಹಲ್ಲೆ ಮಾಡಿದ ರಾಮಮೂರ್ತಿ ನಗರ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ವಿರುದ್ಧ ಕೇಸ್ ದಾಖಲಿಸಲಾಗಿದೆ. ರಾಮಮೂರ್ತಿ ನಗರ ಠಾಣೆ ಪಿಎಸ್ಐ ಮಂಜುನಾಥ್ ಅವರು ತಾಯಿಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 16ರಂದು ಕೆಆರ್ ಪುರದ ಅಯ್ಯಪ್ಪ ನಗರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಮಂಜುನಾಥ್ ಅವರ ವಿರುದ್ಧ ದೂರು ದಾಖಲಾಗಿದೆ.