ಬೆಂಗಳೂರು : ಡಾ.ಪುನೀತ್ ರಾಜ್’ಕುಮಾರ್ ಹೃದಯಜ್ಯೋತಿ ಯೋಜನೆ ರಾಜ್ಯದ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್ ರಾಜ್’ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲಾಗುವುದು. ಈ ಯೋಜನೆ ಅಡಿಯಲ್ಲಿ ₹25,000 ಮೌಲ್ಯದ ಜೀವರಕ್ಷಕ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತಿದೆ.
ಈಗಾಗಲೇ ಮೊದಲ ಮತ್ತು ಎರಡನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದ್ದು, ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.