ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ನೈಜೀರಿಯಾ ಮೂಲದ ವ್ಯಕ್ತಿಯೋರ್ವನನ್ನು ಹಾಡಹಗಲೇ ಹೊಡೆದು ಹತ್ಯೆ ಮಾಡಲಾಗಿದೆ.
ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಚಿಕನ್ ತರಲು ಮನೆಯಿಂದ ಹೊರ ಬಂದಿದ್ದ ವಿದೇಶಿ ಪ್ರಜೆ ಸ್ಥಳೀಯನ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ, ಈ ವೇಳೆ ಆತ ಮರದ ತುಂಡಿನಿಂದ ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಬಳಿಕ ಗಾಯಗೊಂಡ ವಿದೇಶಿ ಪ್ರಜೆ ಸ್ವಲ್ಪ ದೂರ ಓಡಿ ಹೋಗಿ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.