
ದಾವಣಗೆರೆ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ ಟಿ.ಮಂಜಪ್ಪ, ಪಿ.ಆಕಾಶ್ ಹಾಗೂ ಆರ್ ಎಂ ಸಿ ಠಾಣೆಯ ಹೆಚ್.ಚಂದ್ರಶೇಖರ್ ಅಮಾನತುಗೊಂಡವರು.
ಜ.29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿ ಚಿನ್ನದ ಅಂಗಡಿಯೊಂದರಲ್ಲಿ 18 ಲಕ್ಷ ರೂಪಾಯಿ ಕಳ್ಳತನವಾಗಿತ್ತು. ಆ ದಿನ ರಾತ್ರಿ ಮೂವರು ಕಾನ್ಸ್ ಟೇಬಲ್ ಗಳನ್ನು ಗಸ್ತು ಸೇವೆಗೆ ನಿಯೋಜಿಸಲಾಗಿತ್ತು. ಇಲಾಖೆ ತನಿಖೆಯಲ್ಲಿ ಕರ್ತವ್ಯ ಲೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ.