HomeKarnatakaBREAKING : ಮುಡಾ ಕೇಸ್'ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಕೋರ್ಟ್’ಗೆ 11,200 ಪುಟಗಳ ತನಿಖಾ...

BREAKING : ಮುಡಾ ಕೇಸ್’ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಕೋರ್ಟ್’ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ.!

ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ 11,200 ಪುಟಗಳ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ.

50 ಜನರ ಹೇಳಿಕೆಗಳನ್ನು ದಾಖಲಿಸಿದ ಪೊಲೀಸರು 21 ಸಂಪುಟ, 11200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದು ಉಲ್ಲೇಖಿಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ.24 ಕ್ಕೆ ಮುಂದೂಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿತ್ತು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಸಾಕ್ಷಾಧಾರ ಕೊರತೆಯಿದೆ. ನಾಲ್ವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ತಿಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular