alex Certify ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್ಸಿಎಸ್ಪಿ/ ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್ಪ್ರನರ್ಶಿಪ್ ಪ್ರೋಗ್ರಾಮ್ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕೆ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 02 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 01 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಎಂಟರ್ಪ್ರೆನರ್ಶಿಪ್ ಪ್ರೋಗ್ರಾಮ್(ಇಪಿ)(ಎಸ್ಸಿ/ಎಸ್ಟಿ ಅಭ್ಯರ್ಥಿ) 10ನೇ ತರಗತಿ ಪಾಸಾಗಿರಬೇಕು. 1 ತಿಂಗಳ ತರಬೇತಿ, 20 ರಿಂದ 45 ವರ್ಷದೊಳಗಿರಬೇಕು. 2 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 01 ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿರಬೇಕು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಫೆಬ್ರವರಿ, 25 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ದಿನಾಂಕ: 25-02-2025 ರ ಸಂಜೆ : 05:00 ಗಂಟೆಯೊಳಗೆ ಉಪ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಛೇರಿಗೆ ಸಲ್ಲಿಸಲು ತಿಳಿಸಿದೆ.ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ: 08272-200519 ಅಥವಾ ಈ-ಮೇಲ್ ddkodagutourism@gmail.com ಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...