
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ ವಿಸ್ತರಿಸಿದೆ.
ಇಡಿ ಸಮನ್ಸ್ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎರಡೂ ಕಡೆಯ ವಕೀಲರ ವಾದ-ಪ್ರತಿ ವಾದಗಳನ್ನು ಆಲಿಸಿತು. ಈ ವೇಳೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಅಲ್ಲದೇ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಗೆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.