
ಬೆಂಗಳೂರು: ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೀನಾಕ್ಷಿ ನೇಗಿ ಮೂಲತಃ ಉತ್ತರಾಖಂಡವರು. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯೂ ಆಗಿದ್ದ ಮೀನಾಕ್ಷಿ ಅವರನ್ನು ಕೇಂದ್ರ ಸರ್ಕಾರ ಸೇವೆಯಿಂದ ಬಿಡುಗಡೆ ಮಾಡಿದ್ದು, ಇದೀಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರನಾಗಿ ನೇಮಕ ಮಾಡಲಾಗಿದೆ.