
ತುಮಕೂರು: ಟ್ರ್ಯಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಪೌರಕಾರ್ಮಿಕ ಮಂಜುನಾಥ್(40) ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡದ ಶನಿ ಮಹಾತ್ಮ ವೃತ್ತದಲ್ಲಿ ಘಟನೆ ನಡೆದಿತ್ತು. ಪಾವಗಡ ಪುರಸಭೆ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಟ್ಯಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದರು. ಪಾವಗಡ ಆಸ್ಪತ್ರೆಯಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪೌರಕಾರ್ಮಿಕ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.