
ಯಾದಗಿರಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಯುವಕನನ್ನು ಪಿಎಸ್ ಐ ಓರ್ವರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಕೆಂಭಾವಿ ಬಳಿ ಬೈಕ್ ಅಪಘಾತ ನಡೆದಿತ್ತು. ಯುವಕ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ. ಘಟನಾ ಸ್ಥಳಕ್ಕೆ ಆಗಮಿಸಿದ ಕೆಂಭಾವಿ ಪಿಎಸ್ ಐ ಅಮೋಜ್ ಕಾಂಬ್ಳೆ, ಯುವಕನನ್ನು ತಮ್ಮದೇ ಸರ್ಕಾರಿ ವಾಹನದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಿಎಸ್ ಐ ಮಾನವೀಯತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.