
ಚಾಮರಾಜನಗರ: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ದಂಧೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಸತ್ತೇಗಾಲ ಹ್ಯಾಂಡ್ ಪೋಸ್ಟ್ ಗ್ರಾಮ ಪಂಚಾಯತಿ ಸದಸ್ಯನನ್ನು ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದು ಅವರನ್ನು ಬಂಧಿಸಲಾಗಿದೆ. ಐದು ವರ್ಷಗಳಿಂದ ಅಕ್ರಮವಾಗಿ ಆಟೋಗಳಿಗೆ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೆಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ.
ಪೊಲೀಸರ ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 5 ಸಿಲಿಂಡರ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಸಿದ್ದುನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.