ಉತ್ತರ ಪ್ರದೇಶ : ಭೀಕರ ಅಪಘಾತಕ್ಕೆ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
ಮಿರಾಜಾಪೂರ್ ಜಿಲ್ಲೆಯ ರೂಪಾಪುರ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಸುನೀತಾ (35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ 12 ಮಂದಿ ಕ್ರೂಸರ್ ವಾಹನದಲ್ಲಿ ಕುಂಭಮೇಳಕ್ಕೆ ತೆರಳಿದ್ದರು. ಪುಣ್ಯಸ್ನಾನ ಮಾಡಿದ ಬಳಿಕ ಪ್ರಯಾಗ್ ರಾಜ್ ನಿಂದ ಕಾಶಿಗೆ ತೆರಳುತ್ತಿದ್ದರು. ವೇಗವಾಗಿ ಬರುತ್ತಿದ್ದ ಕ್ರೂಸರ್ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 6 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಮೃತರನ್ನು ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.