
ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಹದೇವ್ ಹಲ್ಲೆಗೊಳಗಾದ ಕಂದಕ್ಟರ್. ಬೆಳಗಾವಿಯಲ್ಲಿ ಮರಾಠಾ ಯುವಕರು ಗೂಂಡಾಗಿರಿ ಮೆರೆದಿದ್ದಾರೆ. ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿಯೊಬ್ಬಳು ಮರಾಠಿಯಲ್ಲಿ ಟಿಕೆಟ್ ಕೇಳಿದ್ದಳು. ಕಂಡಕ್ಟರ್ ಮಹಾದೇವ್ ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ರೊಚ್ಚಿಗೆದ್ದ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು ಬಸ್ ನಿಲ್ಲಿಸಿ ಕಂಡಕ್ಟರ್ ಕೊರಳಪಟ್ಟಿ ಹಿಡಿದು ಮನಬಂದಂತೆ ಥಳಿಸಿದ್ದಾರೆ.
ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಗಂಭೀರವಾಗಿ ಹಲ್ಲೆಗೊಳಗಾಗಿರುವ ಕಂದಕ್ಟರ್ ಮಹಾದೇವ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.