
ಕೊಲ್ಲೂರು: ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗಡೆಹಕ್ಲುನಲ್ಲಿ ನಡೆದಿದೆ.
ಮೃತರನ್ನು ಬೈಂದೂರಿನ ಕಾಲ್ತೋಡು ಗ್ರಾಮದ ರಾಮ ಎಂದು ಗುರುತಿಸಲಾಗಿದೆ. ಪುತ್ರಿ ಜ್ಯೋತಿ ಅವರ ಮನೆಯಲ್ಲಿ ಕೃಷಿ ಕೆಲಸಕ್ಕಾಗಿ ವಾರದ ಹಿಂದೆ ಹೆಗ್ಗಡೆಹಕ್ಲುಗೆ ರಾಮ ಬಂದಿದ್ದರು. ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುವಾಗ ಕಾಯಿಯೊಂದು ಅವರ ತಲೆಯ ಮೇಲೆ ಬಿದ್ದಿದೆ. ಇದರಿಂದಾಗಿ ರಾಮ ಮರದಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಬಿದ್ದಿದ್ದಾರೆ.
ಬಿದ್ದ ರಭಸಕ್ಕೆ ಅವರ ತಲೆಗೆ ಗಾಯವಾಗಿದ್ದು, ಕೂಡಲೇ ಆಂಬುಲೆನ್ಸ್ ನಲ್ಲಿ ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಕೊಲ್ಲೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.